Events Gallery
Workshops and Activities :
|
||||
|
ದಿನಾಂಕ: ೨೩-೦೬-೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ, ಕ್ರೀಡಾ ನಿರ್ದೇಶನಾಲಯ ಹಾಗೂ ವಸತಿ ನಿಲಯಗಳ ಸಹಯೋಗದಲ್ಲಿ ವಾರ್ಷಿಕ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ಬಿ. ಕೆ. ರವಿ, ಹಾಗೂ ಒಡಲ ಧ್ವನಿ ಮಹಿಳಾ ಒಕ್ಕೂಟದ ಸಂಸ್ಥಾಪಕಿ ಡಾ. ಭುವನೇಶ್ವರಿ ಕಾಂಬಳೆ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕುಲಸಚಿವರು ಶಂಕರಗೌಡ ಸೋಮನಾಳ, ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ, ಜ್ಯೋತಿ ಉಪಾಧ್ಯೆ , ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಹನುಮಂತಯ್ಯ ಪೂಜಾರಿ, ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸ್ನಾತಕ - ಸ್ನಾತಕೋತ್ತರ ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ - ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. |
||||
|
ದಿನಾಂಕ: ೨೧-೦೬-೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಯೋಗ ಹಾಗೂ ದೈಹಿಕ ಶಿಕ್ಷಣ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ೧೨ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಶ್ರೀಮತಿ ಕೀರ್ತಿ ಮಠಪತಿ ಉದ್ಘಾಟಿಸಿ ಯೋಗದ ಮಹತ್ವವನ್ನು ವಿವರಿಸಿದರು; ಮಾನ್ಯ ಕುಲಸಚಿವರಾದ ಶಂಕರಗೌಡ ಸೋಮನಾಳ ಅವರ ಅಧ್ಯಕ್ಷತೆಯಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದರು. |
||||
|
ದಿನಾಂಕ: ೦೯-೦೬-೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗವು ಯುನಿಸೆಫ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ "ಮಕ್ಕಳ ವಿಷಯಗಳ ಕುರಿತು ಪತ್ರಕರ್ತರಿಗೆ ಪರಿಚಯ" ಕಾರ್ಯಾಗಾರವು ಉದ್ಘಾಟಿಸಲಾಯಿತು. ಕಿಶೋರರ ಆರೋಗ್ಯ, ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತಾದ ಈ ಮಹತ್ವದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. |
||||
|
ದಿನಾಂಕ: ೦೫-೦೬-೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶ್ವ ಬೈಸಿಕಲ್ ದಿನ-೨೦೨೬ ಆಚರಿಸಲಾಯಿತು. ದಿನಾಚರಣೆಯ ಸಂದರ್ಭದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಭಾಗವಹಿಸಿ ಬೈಸಿಕಲ್ ಬಳಕೆಯ ಮಹತ್ವವನ್ನು ವಿವರಿಸಿದರು. |
||||
|
ದಿನಾಂಕ: ೦೫-೦೬-೨೦೨೬ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕೋಶದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ವಿಜಯಾ ಕೋರಿಶೆಟ್ಟಿ, ಉದ್ಯಮಿ ಬಸಂತಕುಮಾರ್ ಪಾಟೀಲ್, ವಲಯ ಅರಣ್ಯಾಧಿಕಾರಿ ಸಂತೋಷಕುಮಾರ ಎ. ಅಜೂರ್, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣನವರ, ಶಿವಗಿರಿ ಸಂಸ್ಥೆಯ ವ್ಯವಸ್ಥಾಪಕಿ ಆರತಿ ಪಾಟೀಲ, ಕ್ಯಾಂಪಸ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ, ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. |
||||
|
ದಿನಾಂಕ: ೦೩-೦೬-೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರದ ಕಾರ್ಯಕ್ರಮವನ್ನು ಮಹಿಳಾ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ಉದ್ಘಾಟಿಸಿದರು.
|
||||
|
ದಿನಾಂಕ: ೧೯-೦೫-೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಅಧ್ಯಯನ ವಿಭಾಗದಲ್ಲಿ ಮಂಗಳವಾರ 2025-26ನೇ ಸಾಲಿನ ಪದವಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಹಾಗೂ ಸಾಧಕ ವಿದ್ಯಾರ್ಥಿನಿಯರ ಸನ್ಮಾನ ಸಮಾರಂಭ.
|
||||
|
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ "ಸೆಲ್ಫಿ ಪಾಯಿಂಟ್ " ಅನ್ನು ಮಹಿಳಾ ವಿವಿಯ ಮಾನ್ಯ ಕುಲಪತಿಗಳಾದ ಪ್ರೊ.ವಿಜಯಾ ಬಿ ಕೋರಿಶೆಟ್ಟಿ ಅವರು ಉದ್ಘಾಟಿಸಿದರು. |
||||
|
ದಿನಾಂಕ: ೦೧-೦೫-೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ “ಗೌತಮ ಬುದ್ಧ”ರ ೨೫೭೦ನೇ ಜಯಂತಿ ಕಾರ್ಯಕ್ರಮವನ್ನು ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. |
||||
|
ದಿನಾಂಕ: ೨೯-೦೪-೨೦೨೬ ರಂದು ಕನ್ನಡ ಭವನದಲ್ಲಿ ನಡೆದ “ಬಸವೇಶ್ವರರ ೮೯೩ನೇ ಜಯಂತ್ಯೋತ್ಸವ” ಕಾರ್ಯಕ್ರಮವನ್ನು ನಿವೃತ್ತ ಡಿಜಿಪಿ ಶಂಕರ ಎಂ. ಬಿದರಿ ಅವರು ಉದ್ಘಾಟಿಸಿದರು; ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. |
||||
|
ದಿನಾಂಕ ೨೭-೦೪-೨೦೨೬ ರಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಒಂದು ದಿನದ ಉದ್ಯೋಗ ಮೇಳ ಕಾರ್ಯಗಾರ ನಡೆಯಿತು. ಕುಲಸಚಿವ ಪ್ರೊ. ಬಿ. ಎಲ್. ಲಕ್ಕಣ್ಣನವರ, ಬೆಂಗಳೂರಿನ ಟನ್ವಿಕ್ ಎಜುಕೇಶನ್‌ನ ರವಿ ಪಿಳ್ಳೆ, ಸಂತೋಷ್ ಹಾಗೂ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಹನುಮಂತಯ್ಯ ಪೂಜಾರಿ ಉಪಸ್ಥಿತರಿದ್ದರು. ಸಮಲೋಚನಾ ಕೋಶದ ಸಂಯೋಜಕ ಡಾ. ಚಂದ್ರಶೇಖರ್ ಮಠಪತಿ ಮತ್ತು ಪ್ರಾಧ್ಯಾಪಕರಾದ ಡಾ. ರಾಜಕುಮಾರ್ ಮಾಲಿಪಾಟೀಲ್, ಡಾ. ಜ್ಯೋತಿ ಉಪಾಧ್ಯಾಯ, ಡಾ. ಕಿರಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. |
||||
|
ದಿನಾಂಕ: ೨೭-೦೪-೨೦೨೬ ರಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. |
||||
|
ದಿನಾಂಕ ೨೧-೦೪-೨೦೨೬ ರಂದು ವಿಜಯಪುರದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ೧೭ನೆಯ ಘಟಿಕೋತ್ಸವದಲ್ಲಿ ಮಾನ್ಯ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಿವಿಧ ವಿಭಾಗಗಳಲ್ಲಿ ಪಿಎಚ್‌ಡಿ ಗಳಿಸಿರುವ ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಿದರು. ಚಿತ್ರದಲ್ಲಿ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್, ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಮತ್ತಿತರರು ಇದ್ದಾರೆ. |
||||
|
ದಿನಾಂಕ ೧೪-೦೪-೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ವಹಿಸಿದ್ದರು. |
||||
|
ದಿನಾಂಕ ೦೫.೦೪.೨೦೨೬ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾನ್ಯ ಕುಲಪತಿಗಳಾದ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಪುಷ್ಪ ನಮನ ಸಲ್ಲಿಸಿದರು. ಚಿತ್ರದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಮತ್ತಿತರರು ಇದ್ದಾರೆ. |
||||
|
ದಿನಾಂಕ ೦೫.೦೪.೨೦೨೬ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ಜೈವಿಕ ಮಾಹಿತಿ ಅಧ್ಯಯನ ಹಾಗೂ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗದ ಸಹಯೋಗದಲ್ಲಿ ವಿಷನ್ ಗ್ರೂಪ್ ಆಪ್ ವಿಜ್ಞಾನ ಮತ್ತು ತಂತ್ರಜ್ಞಾ ದಾರ್ಶನಿಕ ಇವರ ಪ್ರಾಯೋಜತ್ವ ಅಡಿಯಲ್ಲಿ ೫ ದಿನಗಳ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೊಗ್ರಾಮ್ ಇನ್ ಕಾಂಪಿಟೇಷನಲ್ ಬಯಾಲಜಿ ಮತ್ತು ಮಾಲಿಕ್ಯುಲರ್ ಬಯಾಲಜಿ ಟೆಕ್ನಿಕ್ಸ್” ಎಂಬ ವಿಷಯದ ಮೇಲೆ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಿ.ಎಲ್.ಡಿ.ಇ, ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅರುಣ.ಸಿ.ಇನಾಮದಾರ, ಮಹಿಳಾ ವಿವಿ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ, ಮತ್ತಿತರರು ಭಾಗವಹಿಸಿದ್ದರು. |
||||
|
ದಿನಾಂಕ ೦೨.೦೪.೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ “ಅಕ್ಕಮಹಾದೇವಿ ಜಯಂತಿ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ವಹಿಸಿದ್ದರು. |
||||
|
ದಿನಾಂಕ: ೩೦.೦೩.೨೦೨೬ ರಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮಹಾವೀರ ಜಯಂತಿ ಅಂಗವಾಗಿ ಆಯೋಜಿಸಿದ್ದ ಭಾವಪೂರ್ಣ ಕಾರ್ಯಕ್ರಮದಲ್ಲಿ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹಾಗೂ ಮತ್ತಿತರು ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. |
||||
|
ದಿನಾಂಕ ೨೩.೦೩.೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದಲ್ಲಿ “ಮುದೆನೂರ, ಶರಣ ದೇವರ ದಾಸಿಮಯ್ಯನವರ ಜಯಂತಿ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಮಾರಂಭವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹಾಗೂ ಮತ್ತಿತರು ಶರಣ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.. |
||||
|
ದಿನಾಂಕ ೧೨.೦೩.೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನಡೆದ ‘ಬಾಲ್ಯ ವಿವಾಹ ನಿಷೇಧ ಹಾಗೂ ದೇವದಾಸಿ ಪದ್ಧತಿ ನಿರ್ಮೂಲನೆ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕ ಪ್ರೊ. ಸಿ. ಎಸ್. ಪಾಟೀಲ್ ಅವರು ಉದ್ಘಾಟಿಸಿದರು. |
||||
|
ದಿನಾಂಕ ೧೧.೦೩.೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ “ವೃತ್ತಿಪರ ಜಾಗೃತಿ ಕಾರ್ಯಕ್ರಮ”ದ ಒಂದು ದಿನದ ಕಾರ್ಯಾಗಾರವನ್ನು ಮಾನ್ಯ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ , ಡಾ. ಮಲ್ಲಮ್ಮ ಯಾಳವಾರ ಹಾಗೂ ಶ್ರೀ. ಶಂಕರಗೌಡ ಎಸ್. ಸೋಮನಾಳ ಅವರು ಉದ್ಘಾಟಿಸಿದರು. |
||||
|
ದಿನಾಂಕ: ೧೧.೦೩.೨೦೨೬ ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಆಯೋಜಿಸಿದ “ವಿಜ್ಞಾನ ವಸ್ತು ಪ್ರದರ್ಶನ” ವನ್ನು ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಇವರು ಉದ್ಘಾಟಿಸಿ, ವಸ್ತು ಪ್ರದರ್ಶನವನ್ನು ವೀಕ್ಷಿಸಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. |
||||
|
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಸಂಶೋಧನಾ, ಮತ್ತು ವಿಸ್ತರಣಾ ಕೇಂದ್ರ, ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಶಿಕ್ಷಣ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಮಹಿಳಾ ಸಾಂಸ್ಕೃತಿಕ ಹಬ್ಬ 2026ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ “ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ಉದ್ಘಾಟಿಸಿದರು. |
||||
|
ದಿನಾಂಕ ೧೦.೦೩.೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ-೨೦೨೬ನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಡಾ. ಮೀನಾ ಚಂದಾವರಕರ ಮತ್ತು ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ಉದ್ಘಾಟಿಸಿದರು. |
||||
|
ದಿನಾಂಕ: ೦೯.೦೩.೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ‘ಎಲ್ಲಾ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗಾಗಿ: ಹಕ್ಕುಗಳು, ನ್ಯಾಯ ಮತ್ತು ಕ್ರಮ’ ಮತ್ತು ಜೆಂಡರ್ ಬಜೆಟ್ ಕುರಿತ ವಿಚಾರ ಸಂಕಿರಣವನ್ನು ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ಉದ್ಘಾಟಿಸಿದರು. |
||||
|
ದಿನಾಂಕ ೦೭.೦೩.೨೦೨೬ ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಮ್ಯಾರಥಾನ್‌ಗೆ ಮಾನ್ಯ ಕುಲಪತಿಗಳಾದ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್. ಲಕ್ಕಣ್ಣವರ್ ಹಾಗೂ ಹಣಕಾಸು ಅಧಿಕಾರಿ ರಾಮಣ್ಣ ಅಥಣಿ ಸೇರಿದಂತೆ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. |












