ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಮಾರ್ಗಸೂಚಿಗಳನ್ವಯ ಪ.ಜಾ/ಪ.ಪಂ ನಿರ್ದೇಶನಾಲಯ ಪ.ಜಾ/ಪ.ಪಂ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಗಳ ಹಿತರಕ್ಷಣೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಪ.ಜಾ/ಪ.ಪಂ ಘಟಕವು ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಲ್ಯಾಪ್‍ಟಾಪ್ ಹಂಚುವುದು, ಕಾರ್ಯಾಗಾರ, ಚರ್ಚಾಗೋಷ್ಠಿ ಮತ್ತು ಸಮ್ಮೇಳನಗಳನ್ನು ಆಯೋಜಿಸುವುದು. ವ್ಯಕ್ತಿತ್ವ ವಿಕಸನ ಮತ್ತು ಕಂಪ್ಯೂಟರ ತರಬೇತಿ ಮುಂತಾದ ಕಾರ್ಯಕ್ರಮಗಳನ್ನು ಪ್ರತಿವರ್ಷ ಹಮ್ಮಿಕೊಳ್ಳುತ್ತದೆ. ಎಲ್ಲಾ ಪ.ಜಾ/ಪ.ಪಂ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ದೊರಕಿಸಿಕೊಡಲು ಸಹಾಯ ಮಾಡುತ್ತದೆ.